ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿರುವ ಸುಮಲತಾ ಅಂಬರೀಶ್ ಬಿರುಸಿನ ಪ್ರಚಾರ, ಪ್ರವಾಸ ನಡೆಸುತ್ತಿದ್ದಾರೆ. ನಟಿ ಸುಮಲತಾ ರಾಜಕೀಯ ಕ್ಷೇತ್ರಕ್ಕೆ ಧುಮುಕಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಸುತ್ತೂರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಸುತ್ತೂರು ಶ್ರೀಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು ಬಳಿಕ ಸ್ವಾಮೀಜಿಗಳೊಂದಿಗೆ ಉಭಯಕುಶಲೋಪರಿ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಸ್ವಾಮೀಜಿಯವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯ. ಹೀಗಾಗಿ