ಅಲ್ಲಿನ ಜನರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಹೈಕೋರ್ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಶಾಶ್ವತ ಕುಡಿಯುವ ನೀರಿಗಾಗಿ ಧರಣಿ ಸತ್ಯಾಗ್ರಹ ಮಾಡಲಾಯಿತು.ಗ್ರಾಮದ ಜನರೆಲ್ಲಾ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಶರಣುರಡ್ಡಿ ಹತ್ತಿಗುಡೂರ, ರಂಗನಾಥ್ ಬಾಗಿಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಹೀಗಾಗಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ