ಬೆಂಗಳೂರು : ರಾಮನಗರ ಜಿಲ್ಲೆಯನ್ನು ಮರುನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.ರಾಮನಗರವನ್ನು ನವಬೆಂಗಳೂರು ಎಂದು ಮರುನಾಮಕರಣ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಬಿಜೆಪಿ ನಾಯಕರು ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರ ಮುಂದೆ ಈ ಪ್ರಸ್ತಾವನೆಯನ್ನು ಇಟ್ಟಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ಕೂಡ ಕೊಟ್ಟಿದ್ದರು. ಇದೀಗ ಈ ಬಗ್ಗೆ ಮಾತನಾಡಿದ ಸಿಎಂ, ರಾಮನಗರ ಜಿಲ್ಲೆ