ಕಲಬುರಗಿ : ಮೈತ್ರಿ ಸರಕಾರವನ್ನು ಜನರ ಹತ್ತಿರಕ್ಕೆ ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಅವಶ್ಯಕವಿರುವ ಶಾಲಾ ಕೊಠಡಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಗಿದೆ. ಈ ಭಾಗದಲ್ಲಿ ಹೊಸ ಶಾಲೆ, ಕಟ್ಟಡ, ಶಿಕ್ಷಕರ ನೇಮಕಾತಿ ಸೇರಿದಂತೆ ಶಾಲೆಗಳ ಮಂಜೂರಾತಿ ಸೇರಿದಂತೆ ಈ ಭಾಗದ ಶಿಕ್ಷಣ ಅಭಿವೃದ್ಧಿ