ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದ್ರು. ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಸಾಲುಮರದ ತಿಮ್ಮಕ್ಕ ತಂದಿದ್ದಾರೆ.ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ