ಮೈಸೂರು : ತಂತಿ ಮೇಲಿನ ನಡಿಗೆ ಎಂದು ಸಿಎಂ ಬಿಎಸ್ ವೈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ. ಸಿಎಂ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಸಿಎಂಗೆ ಒತ್ತಡ ಇದ್ದೇ ಇರುತ್ತದೆ ಅವರು ನಮ್ಮ ಟೀಂ ಕ್ಯಾಪ್ಟನ್. ಸಿಎಂ ಯಡಿಯೂರಪ್ಪ ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಸಹಕಾರ ಇದ್ದೇ ಇರುತ್ತೆ ಎಂದು ಎಸ್.ಎ.ರಾಮದಾಸ್ ಭರವಸೆ ನೀಡಿದ್ದಾರೆ.