ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಮಾಡಬಾರದ ಕೆಲಸ ಮಾಡಿಕೊಂಡಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಸಹಿತ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲ್ಲೂಕಿನ ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕೊಪ್ಪದಲ್ಲಿ ನಡೆದಿದೆ.ಸೌಜನ್ಯ (5), ಆದ್ಯಾ(2) ಜೊತೆಗೆ ತಾಯಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಇವರು ಕಾಣೆಯಾಗಿದ್ದರು. ಹುಣಸೇಕೊಪ್ಪ ಗ್ರಾಮದ ಖಾಸಗಿ ತೋಟವೊಂದರ ಕೆರೆಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ.