ಸಿಎಂ ಬಿ.ಎಸ್.ಯಡಿಯೂರಪ್ಪನವರು ವಿದ್ಯಾರ್ಥಿನಿಯೊಬ್ಬಳು ಕೇಳಿದ ಮಾತಿಗೆ ಒಂದು ಕ್ಷಣ ಆಶ್ಚರ್ಯ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿ ಆಸೆ ಈಡೇರಿಸೋದಾಗಿ ಭರವಸೆ ನೀಡಿದ್ರು.ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ವಿದ್ಯಾರ್ಥಿನಿಯೊಬ್ಬಳು ಪಠ್ಯಪುಸ್ತಕ ಕೊಡಿಸುವಂತೆ ಕೇಳಿದ್ದಾಳೆ.ಒಂದು ಕ್ಷಣ ಆಶ್ಚರ್ಯಚಕಿತಗೊಂಡ ಮುಖ್ಯಮಂತ್ರಿಗಳು, ನಾಳೆ ಸಂಜೆಯೊಳಗೆ ಅಗತ್ಯ ಪಠ್ಯಪುಸ್ತಕಗಳನ್ನು ಒದಗಿಸುವುದಾಗಿ ಭರವಸೆ ನೀಡಿದ್ರು.ಹಿರಣ್ಯಕೇಶಿ ನದಿ ಪ್ರವಾಹದಿಂದ ನಿರಾಶ್ರಿತರಾಗಿರುವ ಸಂಕೇಶ್ವರ ಪಟ್ಟಣದ ರಾಮಚಿತ್ರ ಮಂದಿರದಲ್ಲಿ ಆರಂಭಿಸಿರುವ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ