ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವಂತೆ ಶಾಸಕ ಬಿ.ಸಿ.ಪಾಟೀಲ್ ಕೂಡ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಅತೃಪ್ತ ಕಾಂಗ್ರೆಸ್ ಶಾಸಕರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಬಿ.ಸಿ. ಪಾಟೀಲ್ ನಡೆ ಚರ್ಚೆಗೆ ಈಗ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯವನರನ್ನು ಭೇಟಿ ಮಾಡಿರುವ ಬಿ.ಸಿ.ಪಾಟೀಲ್ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಬಿ.ಸಿ. ಪಾಟೀಲ್, ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು. ಬಿ.ಸಿ. ಪಾಟೀಲ್