ಯಾವುದೇ ಪಕ್ಷವಾದರೂ ಸರಿ, ಚುನಾವಣೆಯಲ್ಲಿ ನಿಲ್ಲಿ ಎಂದು ಮಂಡ್ಯದ ಜನತೆ ಒತ್ತಡ ಹೇರುತ್ತಿದ್ದಾರೆ. ಅವರ ಪ್ರೀತಿ, ಅಭಿಮಾನಕ್ಕೆ ಸದಾ ಚಿರಋಣಿ ಎಂದು ನಟ ಅಂಬರೀಶ್ ಅವರ ಪತ್ನಿ ಸುಮಲತ ಹೇಳಿದ್ದಾರೆ. ಮಂಡ್ಯದ ಬಗ್ಗೆ ಅಂಬರೀಶ್ ಅವರು ಅಪಾರ ಕನಸನ್ನು ಇಟ್ಟುಕೊಂಡಿದ್ದರು. ಅವರ ಕನಸನ್ನು ನನಸು ಮಾಡುವುದು ನನ್ನ ಉದ್ದೇಶ. ಮಂಡ್ಯದ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ಹೀಗಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಅಂಬರೀಶ್ ಅವರ