ಬೆಂಗಳೂರು : ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಕುಮಾರ ಉದ್ಯೋಗ ಎಂಬ ಆ್ಯಪ್ ವೊಂದನ್ನು ಬಿಡುಗಡೆ ಮಾಡಿದ್ದು, ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬಕ್ಕೆ ಕರ್ನಾಟಕದ ಯುವಕರಿಗೆ ತನ್ನದೊಂದು ಸಣ್ಣ ಉಡುಗೊರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಆ್ಯಪ್ ಮೂಲಕ ಕರ್ನಾಟಕದ ನಿರುದ್ಯೋಗಿಗಳಿಗೆ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಭರವಸೆಯನ್ನು ನೀಡಿದೆ. ಸಾಮಾಜಿಕ ತಾಣಗಳಲ್ಲಿ ಈ ಸುದ್ದಿ ರವಾನೆಯಾಗುತ್ತಿದ್ದಂತೆ ಒಂದು ಗಂಟೆಯೊಳಗೆ ಎಂಟು ಸಾವಿರ