ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ. ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಹೆಚ್ಡಿಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಡಾ. ಸತೀಶ್ಚಂದ್ರ ಹಾಗೂ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ.ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸೋಣ