ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಈ ನಡುವೆ ಮಾಜಿ ಶಾಸಕ ಮುನಿರತ್ನ ಅವರಿಗೆ ಕೊರೊನಾ ವೈರಸ್ ತಗುಲಿರೋದು ದೃಢಪಟ್ಟಿದೆ.ರಾಜರಾಜೇಶ್ವರಿ ನಗರ ವಿಧಾನಸಭೆ ಮತಕ್ಷೇತ್ರದ ಮಾಜಿ ಶಾಸಕರಾಗಿರುವ ಮುನಿರತ್ನ ತಮಗೆ ಕೊರೊನಾ ಇರುವುದನ್ನು ಅವರೇ ಬಹಿರಂಗಪಡಿಸಿದ್ದಾರೆ.ಮಾಜಿ ಶಾಸಕರು ಶೀಘ್ರ ಗುಣಮುಖರಾಗಲೆಂದು ಪಕ್ಷದ ಕಾರ್ಯಕರ್ತರು ಹಾರೈಸಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.