ಆಂಗ್ಲಭಾಷೆಯಲ್ಲಿ ಬರೆಸಲಾಗಿದ್ದ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ಪ್ರೇಮ ಮೆರೆದ ಘಟನೆ ನಡೆದಿದೆ. ಯಾದಗಿರಿ ತಾಲೂಕಿನ ಗುರುಮಠಕಲ್ ಪಟ್ಟಣದ ಮುಖ್ಯರಸ್ತೆ ಸೇರಿದಂತೆ ಎಲ್ಲಾ ಕಡೆ ಅಂಗಡಿ, ಮುಂಗಟ್ಟು ಸಂಘ ಸಂಸ್ಥೆಗಳ ಇಂಗ್ಲೀಷ್ ನಾಮಫಲಕಗಳನ್ನು ತೆಗೆಸಲಾಗಿದೆ.ಕನ್ನಡದಲ್ಲಿ ನಾಮಫಲಕಗಳನ್ನು ಅಳವಡಿಸುವಂತೆ ಪುರಸಭೆ ಮುಖ್ಯಾಧಿಕಾರಿ ಜೀವನಕುಮಾರ ಕಟ್ಟೀಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಹಿರಿಯ ಆರೋಗ್ಯ ನಿರೀಕ್ಷಕ ರಾಮುಲು ಗೌಡ ಮಾತನಾಡಿ, ಕಳೆದ ಒಂದು ವಾರದಿಂದ ತಮ್ಮ ತಮ್ಮ ಅಂಗಡಿಗಳ ನಾಮಫಲಕಗಳನ್ನು 6೦:4೦ ಅನುಪಾತದಲ್ಲಿ ಕನ್ನಡ ಮತ್ತು