ಮೈಸೂರು : ದೇವರು ಇಂತಹ ಆಹಾರವನ್ನೇ ತಿನ್ನಿ ಎಂದು ಹೇಳಿದ್ದಾನಾ ಎಂದು ಮುಸ್ಲಿಂರನ್ನು ಸಿದ್ದರಾಮಯ್ಯ ಕೇಳಲಿ, ಅದನ್ನು ಕೇಳಲು ಅವರಿಗೆ ತೊಡೆ ನಡುಗುತ್ತಾ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು.ಮಾಂಸಾಹಾರ ತಿಂದು ದೇವಸ್ಥಾನ ಪ್ರವೇಶ ಮಾಡಬಾರದು ಎಂದು ದೇವರು ಹೇಳಿದ್ದಾನಾ ಎಂಬ ಸಿದ್ದರಾಮಯ್ಯ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.ದೇವರು ಇಂತಹ ಆಹಾರ ತಿಂದು ಬನ್ನಿ ಎಂದು ಹೇಳಿದ್ದಾನಾ ಎಂದು ಮುಸ್ಲಿಂರನ್ನು ಕೇಳಿ. ಮುಸ್ಲಿಂರಿಗೆ ಹಂದಿ ತಿನ್ನಬಾರದು ಎಂದು ಹೇಳಿದ್ದಾರಾ?