ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯ ಫಲಿತಾಂಶವನ್ನು ಗಮನಿಸಿದ ಬಳಿಕ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಿ ತೀರ್ಥಯಾತ್ರೆ ಮಾಡಲಿ ಎಂದು ಸಚಿವ ಆರ್.ಅಶೋಕ್ ಕಾಂಗ್ರೆಸ್ಗೆ ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳನ್ನು ಗಮನಿಸಿದಾಗ ಮತ್ತೆ, ಮತ್ತೆ, ಮತ್ತೆ ಬಿಜೆಪಿ ಜಯಭೇರಿ ಬಾರಿಸುತ್ತಿದೆ.ಇಡೀ ದೇಶದಲ್ಲಿ ಕಾಂಗ್ರೆಸ್ಗೆ ಪಂಜಾಬ್ ಒಂದೇ ಇದ್ದಿದ್ದು, ಪಂಜಾಬ್ ಕೂಡ ಇದೀಗ ಕಾಂಗ್ರೆಸ್ ಕೈ ತಪ್ಪಿದೆ. ಹಾಗಾಗಿ ಕಾಂಗ್ರೆಸ್ಗೆ ಇನ್ನುಮುಂದೆ ಪಾದಯಾತ್ರೆ ಬೇಡ ತೀರ್ಥಯಾತ್ರೆ