ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದೆ ಹೋಗ ನಿಲ್ಲುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಡವಳಿಕೆ ನೋಡಿದರೆ ಹಾಗೆ ಅನಿಸುತ್ತದೆ. ಸಿದ್ದರಾಮಯ್ಯ ತನಗೆ ಬೇಕಾದವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಿದ್ದಾರೆ. ಚುನಾವಣೆಯಲ್ಲಿ 40–50 ಸ್ಥಾನ ಪಡೆದು ಬಿಜೆಪಿ ಸೇರಿದ್ರೂ ಆಶ್ಚರ್ಯ ಪಡಬೇಕಿಲ್ಲ ಎಂದಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ