ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಲಿ, ಸಿಂಹಗಳಾದರೆ ಕರ್ನಾಟಕದವವರು ನರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ನೀರಿಗಾಗಿ ಕರ್ನಾಟಕದಲ್ಲಿ ಬಂದ್ ನಡೆಯುತ್ತಿದ್ದಾಗ ರಾಜ್ಯಕ್ಕೆ ಬಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಹಾದಾಯಿ ವಿಚಾರ ಪ್ರಸ್ತಾಪ ಮಾಡದಿರುವುದು ಬೇಸರದ ಸಂಗತಿ ಎಂದಿದ್ದಾರೆ. ಮಹಾದಾಯಿ ವಿವಾದ ಬಗೆಹರಿಸಲು ಪ್ರಧಾನಮಂತ್ರಿ