ಬೆಳಗಾವಿ : ಸುವರ್ಣಸೌಧದ ಸಭಾಂಗಣದ ಒಳಗಡೆ ಸಾವರ್ಕರ್ ಸೇರಿ 7 ಮಂದಿಯ ಫೋಟೋವನ್ನು ಅನಾವರಣ ಮಾಡಲಾಗಿದೆ.ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಲಾಲ್ ಬಹಾದ್ದೂರ್ ಶಾಸ್ತ್ರೀ, ಸರ್ದಾರ್ ವಲ್ಲಭಭಾಯ್ ಪಟೇಲ್, ಬಸವಣ್ಣ, ಸ್ವಾಮಿ ವಿವೇಕಾನಂದ, ವಿ ಡಿ ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಲಾಗಿದೆ.ಮಾಧ್ಯಮಗಳನ್ನ ನಿರ್ಬಂಧ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಸ್ಪೀಕರ್ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಿತು. ಸ್ಪೀಕರ್ ಕುಳಿತುಕೊಳ್ಳುವ ಆಸನದ ಮೇಲೆ ಬಸವಣ್ಣನ ಫೋಟೋ ಹಾಕಲಾಗಿದೆ.