ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಭೀಕರ ಪ್ರವಾಹ ಉಂಟಾಗಿ ಹಾನಿಗೊಳಗಾದ ಪ್ರದೇಶದ ನೊಂದ ಸಂತ್ರಸ್ಥರಿಗೆ ನೆರವು ಹರಿದುಬರುತ್ತಿದೆ.ನೆರೆ ಪೀಡಿತರಿಗೆ ಸಹಾಯಕವಾಗಲು ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹಾಗೂ ಜಿ.ಪಂ. ಎಲ್ಲ ಸದಸ್ಯರು 2019ರ ಆಗಸ್ಟ್ ನ ಒಂದು ತಿಂಗಳ ಗೌರವಧನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಣಯಿಸಿದ್ದಾರೆ.ಈ ಸಂಬಂಧ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು