ತೃತೀಯಲಿಂಗಿಗಳು, ಪುರುಷರ ಜತೆ ಲೈಂಗಿಕ ಕ್ರಿಯೆ ನಡೆಸುವ ಪುರುಷರು (ಎಂಎಸ್ಎಂ) ಮತ್ತು ಲೈಂಗಿಕ ಕಾರ್ಯಕರ್ತೆಯರು ರಕ್ತದಾನ ಮಾಡುವುದನ್ನು ನಿರ್ಬಂಧಿಸಿರುವ 2017ರ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದೆ.ಈ ಮಾರ್ಗಸೂಚಿಗಳು ವೈಜ್ಞಾನಿಕ ಪುರಾವೆಗಳನ್ನು ಆಧರಿಸಿದ್ದು, ತಜ್ಞರಿಂದ ಜಾಗತಿಕವಾಗಿ ಮಾನ್ಯತೆ ಪಡೆದಿವೆ ಎಂದು ತಿಳಿಸಿದೆ. ಯುರೋಪಿಯನ್ ರಾಷ್ಟ್ರಗಳು ಲೈಂಗಿಕವಾಗಿ ಸಕ್ರಿಯವಾಗಿರುವ ಸಲಿಂಗಕಾಮಿಗಳು ರಕ್ತದಾನ ಮಾಡುವುದನ್ನು ನಿಷೇಧಿಸಿವೆ.ಯುರೋಪಿಯನ್ ಪುರುಷರು-ಪುರುಷರೊಂದಿಗೆ ಲೈಂಗಿಕತೆ ಹೊಂದಿರುವ ಬಗ್ಗೆ ಇಂಟರ್ನೆಟ್ ಸಮೀಕ್ಷೆ ಆಧರಿಸಿ ಈ ಕ್ರಮಕೈಗೊಂಡಿವೆ ಎಂದು ಕೇಂದ್ರ