ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್ ರಚನೆಯಾಗಿದ್ದು 29 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕ್ಯಾಬಿನೆಟ್ ಆಯ್ಕೆ ಲೆಕ್ಕಾಚಾರವನ್ನು ಗಮನಿಸಿದರೆ ಬಿಜೆಪಿ ಹೈಕಮಾಂಡ್ ಜಾಣ ನಡೆಯನ್ನು ಆಯ್ದುಕೊಂಡಿರುವುದು ಸ್ಪಷ್ಟವಾಗಿದೆ. ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಬಂಡಾಯವೆದಿದ್ದ ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್ಗೆ ಮಂತ್ರಿಗಿರಿ ಸಿಕ್ಕಿಲ್ಲ. ಇನ್ನು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟು ದೆಹಲಿಗೆ ಓಡಾಡಿದ್ದ ಅರವಿಂದ್ ಬೆಲ್ಲದ್ ಅವರಿಗೂ ಸಚಿವ ಸ್ಥಾನ ಧಕ್ಕಿಲ್ಲ. ಇವರುಗಳಿಗೆ ಸಚಿವ ಸ್ಥಾನ ಸಿಗದಂತೆ