ಗೃಹಲಕ್ಷ್ಮಿ ಯೋಜನೆಯಲ್ಲಿ ಹೆಸರು ನೋಂದಾಯಿಸಿಕೊಂಡರೂ ಸಹ ಎಷ್ಟೋ ಮಂದಿಗೆ ಹಣ ಬರುತ್ತಿಲ್ಲ. ಈ ಸಮಸ್ಯೆಗೆ ಕಾರಣವನ್ನು ಡಿ.ಕೆ. ಶಿವಕುಮಾರ್ ಬಹಿರಂಗಪಡಿಸಿದ್ದಾರೆ. ಶುಕ್ರವಾರ ಯಲಹಂಕದಲ್ಲಿ ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ನೋಂದಣಿ ವೇಳೆಯಲ್ಲಿ ಮಾಡಿರುವ ಎಡವಟ್ಟುಗಳಿಂದಾಗಿ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂದರು. ಕಳೆದ ಬಾರಿ ಜನಸ್ಪಂದನದಲ್ಲಿ ಈ ವಿಷಯ ನನ್ನ ಗಮನಕ್ಕೆ ಬಂತು. ಸುಮಾರು 5-6 ಲಕ್ಷ ಮಂದಿ ಗೃಹಲಕ್ಷ್ಮಿ ಯೋಜನೆಗೆ