ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವುದರಿಂದ ಇದರ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ತಟ್ಟಿದೆ.ಸನ್ನಡತೆ ಆಧಾರದ ಮೇಲೆ ಆಗಸ್ಟ್ 15 ರಂದು ಜೈಲುವಾಸದಿಂದ ಹೊರಬರಬೇಕಿದ್ದ ಸುಮಾರು ನೂರಾರು ಕೈದಿಗಳಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ.ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಸವ ದಿನದಂದು ಸನ್ನಡತೆ ಹಾಗೂ ಮನ ಪರಿವರ್ತನೆಗೊಂಡ ಕೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತದೆ. ಸಚಿವ ಸಂಪುಟ ಶಿಫಾರಸು ಹಾಗೂ ರಾಜ್ಯಪಾಲರ ಅನುಮತಿಯಂತೆ