ಶಬರಿಮಲೆಗೆ ಮಹಿಳೆಯರು ಪ್ರವೇಶಿಸುವ ಬಗ್ಗೆ ಸಿಎಂ ಹೆಚ್.ಡಿ.ಕೆ ಪ್ರತಿಕ್ರಿಯೆ ಏನು?

ಮೈಸೂರು| pavithra| Last Modified ಬುಧವಾರ, 17 ಅಕ್ಟೋಬರ್ 2018 (13:11 IST)
ಮೈಸೂರು : ಮಹಿಳೆಯರು ವಿಚಾರಕ್ಕೆ ಸಂಬಂಧಿಸಿದಂತೆ ಪರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ಈ ಬಗ್ಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು,’ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಸೂಕ್ಷ್ಮವಾದುದು, ಇಂತಹ ಧಾರ್ಮಿಕ ವಿಚಾರದಲ್ಲಿ ಅಗೋಚರ ಶಕ್ತಿಯ ಹಿನ್ನೆಲೆ ಇರುತ್ತೆ. ನಮ್ಮ ದೇಶದಲ್ಲಿ ಹಿಂದಿನಿಂದಲೂ ಸಂಸ್ಕೃತಿ, ಕೆಲವು ಆಚಾರ ವಿಚಾರಗಳನ್ನು ನಡೆಸಿಕೊಂಡು ಬರಲಾಗಿದೆ. ಪೂರ್ವಿಕರು ಇದನ್ನೆಲ್ಲಾ ಯಾಕೆ ತಂದಿದ್ದಾರೆ ಗೊತ್ತಿಲ್ಲ. ಕೆಲವರು ಇದನ್ನು ದಬ್ಬಾಳಿಕೆ ಎನ್ನುತ್ತಾರೆ. ಮತ್ತೆ ಕೆಲವರು ಮೂಢನಂಬಿಕೆ ಅಂತಾರೆ’ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.


ಇನ್ನು ಈ ವಿಚಾರವನ್ನು ಸರ್ಕಾರ ಹಾಗೂ ವಿರೋಧ ಪಕ್ಷಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಆದರೆ ಇದನ್ನು ಕೆಲವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :