ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವಿಶ್ವವಿದ್ಯಾಲಯ ಅಂಥ ಕೆಲಸ ಮಾಡುತ್ತಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಜಾಗೃತ ದಳವನ್ನು ರಚಿಸಲಾಗಿದ್ದು, ಮನೆಯಿಂದಲೇ ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕುಲಪತಿ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಜಾಗೃತ ದಳ ಹಾಗೂ ಆಯಾ ಕಾಲೇಜುಗಳ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಕಾಲೇಜು ಜಾಗೃತ ದಳವನ್ನು ರಚಿಸಲಾಗಿದೆ.ವಿಶ್ವವಿದ್ಯಾಲಯ ಹಾಗೂ ಕಾಲೇಜು ವ್ಯಾಪ್ತಿಯ ಗ್ರಾಮವನ್ನು ದತ್ತು ಪಡೆದು ಅಥವಾ