ವಿಧಾನಸಭೆ ಉಪ ಚುನಾವಣೆಯಲ್ಲಿ ಕೈ ಅಭ್ಯರ್ಥಿ ಗೆಲುವು ಸಾಧಿಸುವಲ್ಲಿ ಚಾಣಕ್ಯ ನಡೆ ಅನುಸರಿಸಿದ ಸಚಿವ ಡಿ.ಕೆ.ಶಿವಕುಮಾರ್ ಕುಂದಗೋಳ ಭೇಟಿ ನೀಡುತ್ತಿದ್ದಾರೆ.ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಜೂನ್ 21 ರಂದು ಕುಂದಗೋಳದಲ್ಲಿ ತಾಲೂಕಿನ ವಿವಿಧ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ.ಅಂದು ಬೆಳಗ್ಗೆ ನಡೆಯಲಿರುವ ಈ ಸಭೆಯಲ್ಲಿ ನಾನಾ ಇಲಾಖೆಗಳ ಸಚಿವರೂ ಭಾಗವಹಿಸಲಿದ್ದಾರೆ.ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ಹೊತ್ತಿದ್ದ ಸಚಿವ ಡಿ.ಕೆ. ಶಿವಕುಮಾರ್ ಅವರು ಚುನಾವಣೆ