ತುಂಬೆ ವೆಂಟೆಡ್ ಡ್ಯಾಂ ನೋಡಲು, ಸಚಿವರು, ಶಾಸಕರು, ಅಧಿಕಾರಿಗಳು ದೌಡಾಯಿಸಿದ್ದಾರೆ.ಸಚಿವ ಯು.ಟಿ. ಖಾದರ್, ಎಂಎಲ್ ಸಿ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೋ ಮತ್ತಿತರರು ತುಂಬೆ ಡ್ಯಾಂನ ನೀರಿನ ಮಟ್ಟ ವೀಕ್ಷಿಸಿದರು.ಮಂಗಳೂರಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚನೆಯನ್ನು ನೀಡಿದ್ರು. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ತುಂಬೆ ಡ್ಯಾಂ ನೀರಿನ ಮಟ್ಟ ಕಡಿಮೆಯಾಗಿದೆ.ದ.ಕ.ಜಿಲ್ಲಾಡಳಿತ, ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ರು. ತಾಲೂಕು ಮಟ್ಟದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನ ಇಡಲಾಗಿದೆ.