ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ದರ ಹಿಂದೆ ರಾಜಕೀಯ ಹಸ್ತಕ್ಷೇಪ ಇಲ್ಲ. ಹೀಗಂತ ವಿರೋಧ ಪಕ್ಷದ ನಾಯಕರ ಆರೋಪವನ್ನು ಕೇಂದ್ರ ಸಂಸದಿಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ ತಳ್ಳಿ ಹಾಕಿದ್ದಾರೆ.ಇತ್ತೀಚೆಗೆ ಕೊರೊನಾದಿಂದ ನಿಧನರಾದ ರಾಜ್ಯ ಸಭಾ ಸದಸ್ಯ ಅಶೋಕ ಗಸ್ತಿ ಅವರ ನಿವಾಸಕ್ಕೆ ಆಗಮಿಸಿ, ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವಾನ ಹೇಳಿದರು.ಆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ತನಿಖಾ ಸಂಸ್ಥೆ ದಾಳಿ ಮಾಡುವ