ಬೆಂಗಳೂರು: ಮಹದಾಯಿ ಯೋಜನೆ ಜಾರಿಗೆ ತಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದು, ಆದರೆ ಇದಕ್ಕೆ ಸ್ವಪಕ್ಷೀಯ ನಾಯಕರು ಬೆಂಬಲ ನೀಡುತ್ತಿಲ್ಲ ಎಂದು ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬೇಸರದಿಂದ ಹೇಳಿದ್ದಾರೆ. ಎಲ್ಲರೂ ಏಕೆ ಸುಮ್ಮನಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಈ ಹಿಂದೆ ಮೂರು ಕಡೆ ಕಾಂಗ್ರೆಸ್ ಸರ್ಕಾರವಿದ್ದರು ಸಮಸ್ಯೆ ಬಗೆಹರಿಸಿರಲಿಲ್ಲ. ಮಹದಾಯಿ ಯೋಜನೆ ಜಾರಿಗೆ ಹೋರಾಡುತ್ತಿರುವವರನ್ನು ಬಿಜೆಪಿ ಕಚೇರಿ ಮುಂದೆ ಧರಣಿ ಕೂರಲು ಕಾಂಗ್ರೆಸ್ ಪಕ್ಷ