ಬೆಂಗಳೂರು, ಸೆ13: ಎಲ್ಲರೂ ಸೇರಿ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಕೆ.ಎಸ್. ಆರ್.ಟಿ.ಸಿ ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ, ಬಿಬಿಎಂಪಿ, ಕಾರ್ಪೊರೇಟ್ ವಲಯ ಎಲ್ಲರೂ ಸೇರಿ ಈ ಮಕ್ಕಳ ಆಸ್ಪತ್ರೆಯನ್ನು ಪುನರ್ ನಿರ್ಮಿಸಿದ್ದಾರೆ.