ಕೊಪ್ಪಳ : ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಶವಗಳ ಸಾಕ್ಷಿ ಕೇಳಿ ಇದೀಗ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಗರದಲ್ಲಿ ಮಾತನಾಡಿದ ಶಾಸಕರು, ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಯ ಮೇಲೆ 12 ನಿಮಿಷ ದಾಳಿ ಮಾಡಿವೆ. ಈ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳುತ್ತಿದೆ. ಹಾಗಾದರೆ ಶವಗಳು ಎಲ್ಲಿವೆ? ಉಗ್ರ ಮೃತ ದೇಹವನ್ನು