ಇಡೀ ರಾಜ್ಯವನ್ನು ಬೆಚ್ಚಿಬೀಳಿಸುವಂತೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಪೊಲೀಸರು. ಚಿಂತಾಮಣಿ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ ಆರೋಪ ಸಾಬೀತುಪಡಿಸಿದ್ದಾರೆ ಚಿಂತಾಮಣಿ ನಗರ ಪೊಲೀಸರು. ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ ಚಿಂತಾಮಣಿ ಡಿವೈಎಸ್ಪಿ ಶ್ರೀನಿವಾಸ್. ಗಂಗಮ್ಮ ದೇವಿ ದೇವಸ್ಥಾನದಲ್ಲಿ ವಿಷ ಪ್ರಸಾದ ಹಂಚಿಕೆ ಹಿನ್ನೆಲೆಯಲ್ಲಿ ದುರ್ಘಟನೆ ನಡೆದಿತ್ತು. ಚಿಂತಾಮಣಿ ನಗರದ ನಾರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಸ್ಥಾನದಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರನ್ನು ಬಲಿ ಪಡೆದಿತ್ತು ವಿಷ ಪ್ರಸಾದ. ಎಂಟು ಜನ