ಸರ್ಕಾರ ಜನರ ಪರ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಎಲ್ಲಿದ್ಯಪ್ಪ ಕುಮಾರಸ್ವಾಮಿ..? ಎಂದು ಲೇವಡಿ ಮಾಡಿದರು. ಅಧಿವೇಶನ ಇದ್ದಾಗಲೇ ಕುಮಾರಸ್ವಾಮಿ ಸದನಕ್ಕೆ ಬರೋದಿಲ್ಲ. ಆಮೇಲೆ ಎಲ್ಲಿದ್ಯಪ್ಪ ಕುಮಾರಸ್ವಾಮಿ ಅಂತ ಹುಡುಕಬೇಕು. ಸದನ ಕರೆಯಿರಿ ಅನ್ನೋದು, ಆಮೇಲೆ ಬರದೆ ಇರೋದು. ಸಿದ್ದರಾಮಯ್ಯ