ವಿವಾದಗಳಿಂದಲೇ ಸದಾ ಸುದ್ದಿಯಲ್ಲಿರುವ ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿ, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಇದೀಗ ದುಬೈನಲ್ಲಿ ಪ್ರತ್ಯಕ್ಷವಾಗಿರುವ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಲ್ಲದೇ ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು,