ಸ್ವಾಭಿಮಾನದ ಹೆಸರಿನಲ್ಲಿ ಮಂಡ್ಯ ಜಿಲ್ಲೆಯ ಜನತೆಗೆ ಮಂಕುಬೂದಿ ಎರಚಿ ಚುನಾವಣೆಯಲ್ಲಿ ಗೆದ್ದು ಸಂಸದೆಯಾದ ನಂತರ ಜಿಲ್ಲೆಗೆ ಕಾಟಾಚಾರಕ್ಕೆ ಸುಮಲತಾ ಭೇಟಿ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬರುತ್ತಿರುವ ನಡುವೆಯೇ ಸುಮಲತಾ ಎಲ್ಲಿದ್ದೀಯಮ್ಮಾ? ಎಂಬ ಪ್ರಶ್ನೆ ಕೇಳಿಬಂದಿದೆ. ಮಂಡ್ಯದ ಗಂಭೀರ ನೆರೆ ಪರಿಸ್ಥಿತಿಯನ್ನು ಅವಲೋಕನ ನಡೆಸಿ ರೈತರಿಗೆ ಪರಿಹಾರವನ್ನು ದೊರಕಿಸಿಕೊಡದ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಮತ್ತು ಉಪವಿಭಾಗಾಧಿಕಾರಿ ಶೈಲಜಾ