Widgets Magazine

15 ಟನ್ ಪಡಿತರ ಅಕ್ಕಿ ಅಕ್ರಮವಾಗಿ ಎಲ್ಲಿಗೆ ಹೋಗುತ್ತಿತ್ತು?

ಚಿತ್ರದುರ್ಗ| Jagadeesh| Last Modified ಬುಧವಾರ, 6 ನವೆಂಬರ್ 2019 (16:45 IST)
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಅಕ್ಕಿ ಸಮೇತ ಜಪ್ತಿ ಮಾಡಿದ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಿತ್ರದುರ್ಗದ ರಾಂಪುರ ಪೊಲೀಸರು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಅಕ್ಕಿ ಸಮೇತ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿಯಿಂದ ಬೆಂಗಳೂರಿಗೆ ಅಕ್ರಮವಾಗಿ 14.5 ಟನ್ ಅಕ್ಕಿ ಪಡಿತರ ಅಕ್ಕಿಯನ್ನು ಸರಬರಾಜು ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿ ಲಾರಿ ಚಾಲಕ ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ.

ಈ ಕುರಿತು ಮೊಳಕಾಲ್ಮೂರು ತಾಲೂಕು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :