ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ತಿಳಿಸಿದೆ. ನಾಳೆ ದೆಹಲಿಯಲ್ಲಿ ಪಕ್ಷದ ವರಿಷ್ಠರು ಹೆಸರು ಫೈನಲ್ ಮಾಡಲಿದ್ದಾರೆ.ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಕೋರ್ ಕಮಿಟಿ ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ಆಗಿದೆ. 22 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತವಾಗಿದೆ. ಒಂದು ಸ್ಥಾನ ಜಾಸ್ತಿಯಾಗಬಹುದೇ ಹೊರತು ಕಡಿಮೆ ಆಗುವುದಿಲ್ಲ ಎಂದರು.ಉಪಚುನಾವಣೆಯ