ಸಂವಿಧಾನದ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಇದೀಗ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಸಂವಿಧಾನ ಬದಲಾಯಿಸಲು ಹೆಗಡೆ ಯಾರು? ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ್ ರಾಯರೆಡ್ಡಿ ಗುಡುಗಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕೇಂದ್ರ ಸಚಿವರಾಗಿ ಮುಂದುವರಿಯಲು ನಾಲಾಯಕ್. ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ. ದೇಶದಲ್ಲಿ ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ