ಆಪರೇಷನ್ ಕಮಲ ಮೂಲಕ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿರುವ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಗೆ ಕಾಂಗ್ರೆಸ್ ಹಿರಿಯ ಸಂಸದ ಟಾಂಗ್ ನೀಡಿದ್ದಾರೆ. ದೊಡ್ಡ ಜನರಿಗೆ ದೊಡ್ಡ ನಮಸ್ಕಾರ. ಅಂಥವರ ಬಗ್ಗೆ ನಾನು ಮಾತನಾಡುವುದಿಲ್ಲ. ಹೀಗಂತ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ ಜಾಧವ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಶಾಸಕ ಜಾಧವ ಈಚೆಗೆ ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ,