ಬೆಂಗಳೂರು : ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಕಗ್ಗಂಟು ಮುಂದುವರಿದಿದ್ದು ಈಗ ಚೆಂಡು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾತ್ರಿ ನಗರದ ಖಾಸಗಿ ಹೋಟೆಲಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಿತು. ಸಭೆಯ ಬಳಿಕ ವೀಕ್ಷಕರು ಶಾಸಕರ ಬಳಿ ಅಭಿಪ್ರಾಯ ವ್ಯಕ್ತಪಡಿಸಿದರು. ತಡರಾತ್ರಿ ಸರಿಸುಮಾರು 1:30ರವರೆಗೂ ವೀಕ್ಷಕರಿಗೆ ಶಾಸಕರು ಅಭಿಪ್ರಾಯ ನೀಡಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ಕೂಡ ಒಪ್ಪುವಂತಹ ತೀರ್ಮಾನವನ್ನೇ ಹೈಕಮಾಂಡ್ ಅಂಗಳಕ್ಕೆ ಕಳುಹಿಸಿಕೊಡಲಾಗಿದೆ.ಹೈಕಮಾಂಡ್ ಈಗ ಯಾವ ನಿರ್ಣಯ ಕೈಗೊಳ್ಳಲಿದೆ