ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. 3ರಿಂದ 6, 6ರಿಂದ 9 ಸಾವಿರ ಆಗ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ.ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ.