ಬೆಂಗಳೂರು (ಆ.08): ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತ. ಐಟಿ- ಇ.ಡಿ. ದಾಳಿಗಳು ಬಿಜೆಪಿ ನಾಯಕರ ಮೇಲೆ ಏಕೆ ಆಗಲ್ಲ? ಬಿಜೆಪಿ ನಾಯಕರೆಲ್ಲಾ ಬಿಪಿಎಲ್ ಕಾರ್ಡುದಾರರೇ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಐಟಿ ದಾಳಿಯಾದ ಬಳಿಕ ಅವರ ಶಿಫಾರಸು ಪ್ರಕಾರ ಇ.ಡಿ.ಯವರು ದಾಳಿ ಮಾಡುತ್ತಾರೆ. ಅದು ಆದಾಯ