ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಚಳಿಗಾಲದ ಅಧಿವೇಶನದಲ್ಲಿ ಸಿಎಂ, ವಿರೋಧ ಪಕ್ಷದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸುವರ್ಣಸೌಧದಲ್ಲಿ ಸದನ ಸುಗಮವಾಗಿ ನಡೆಯಲು ವಿರೋಧ ಪಕ್ಷವಾಗಿರುವ ಬಿಜೆಪಿ ಸಹಕಾರ ನೀಡುತ್ತಿದೆ. ಹೀಗಾಗಿ ವಿಪಕ್ಷವನ್ನು ಅಭಿನಂದಿಸುವುದಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅಧಿವೇಶನದಲ್ಲಿ ಮಾತನಾಡಿದ ಸಿಎಂ, ಮುಂಗಾರು ಮಳೆ ಕೊರತೆಯಿಂದ ಬರ ಎದುರಿಸುತ್ತಿರುವ ತಾಲ್ಲೂಕುಗಳ ಘೋಷಣೆ, ಈಗಾಗಲೇ ಹಿಂಗಾರು ಮಳೆ ಕೊರತೆಯಿಂದ ಬರಕ್ಕೆ ಒಳಗಾಗಿರುವ ತಾಲ್ಲೂಕುಗಳ ಘೋಷಣೆಯನ್ನು 2ನೇ ಹಂತದಲ್ಲಿ ಮಾಡಲಾಗುತ್ತದೆ.