ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಸಿಡಿದೆದ್ದಿದ್ದೇಕೆ?

ಬೆಂಗಳೂರು| pavithra| Last Modified ಶುಕ್ರವಾರ, 20 ಸೆಪ್ಟಂಬರ್ 2019 (14:53 IST)
ಬೆಂಗಳೂರು : ಕುಮಾರಸ್ವಾಮಿ ಅವರ ಅವಧಿಯಲ್ಲಿ ಜಾರಿಯಾಗಿರುವ ಕೆಲ ಯೋಜನೆಗಳನ್ನು ಯಡಿಯೂರಪ್ಪ ಅವರ ಸರ್ಕಾರ ತಡೆಹಿಡಿಯಲು ಮುಂದಾದ ಹಿನ್ನಲೆಯಲ್ಲಿ ಇದೀಗ ಮಾಜಿ ಸಿಏಂ ಕುಮಾರಸ್ವಾಮಿ, ಅವರ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. ‘ಬಡವರ ಬಂಧು’ ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಬಡವರ ಬಂಧು ಕಾರ್ಯಕ್ರಮವನ್ನು ಜಾರಿಗೆ ತರಲಾಗಿತ್ತು. ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ ಎಂದು ಕಿಡಿಕಾರಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :