ಮೈಸೂರು : ಇಂದು ಮೈಸೂರು ಅರಮನೆ ಸೇರಿದಂತೆ ನಾಡಿನಾದ್ಯಂತ ಆಯುಧ ಪೂಜೆ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆದರೆ ಅರಮನೆಯಲ್ಲಿ ಪೂಜಾ ಕಾರ್ಯಕ್ರಮಗಳನ್ನು ಮುಂದೆ ನಿಂತು ನಡೆಸಬೇಕಾಗಿರುವ ರಾಜವಂಶಸ್ಥೆ ಪ್ರಮೋದಾದೇವಿ ಅವರು ಆಯುಧ ಪೂಜೆಯನ್ನು ಮೊಟಕುಗೊಳಿಸಿ ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.