ಬೆಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರುತ್ತಿರುವ ಹಿನ್ನಲೆಯಲ್ಲಿ ಇದೀಗ ನಟಿ ರಮ್ಯಾ ಮತ್ತೆ ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದ್ದಾರೆ. ಸೋಮವಾರ (ಸೆಪ್ಟೆಂಬರ್ 10) ದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಮಿತ್ರಪಕ್ಷಗಳು ಭಾರತ್ ಬಂದ್ ನಡೆಸಿದ್ದರು. ಅಂದು ನಟಿ ರಮ್ಯಾ ಭಾರತದ ಕ್ರಿಕೆಟ್ ಆಟಗಾರ ರವೀಂದ್ರ ಜಡೇಜಾ ಅವರು ಗಳಿಸುವ ರನ್ ಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಹೆಚ್ಚಾಗುತ್ತಿದೆ ಎಂದು ಟ್ವೀಟ್ ಮಾಡಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು.