Widgets Magazine

ಬಿಜೆಪಿಯಲ್ಲಿ ಅಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಹುಬ್ಬಳ್ಳಿ| pavithra| Last Updated: ಮಂಗಳವಾರ, 28 ಜನವರಿ 2020 (11:18 IST)
ಹುಬ್ಬಳ್ಳಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಸಿಎಂಗೆ ಅನುಮತಿ ನೀಡ್ತಿಲ್ಲ ಎಂದು ವಿಪಕ್ಷ ನಾಯಕ ಹೇಳಿದ್ದಾರೆ.


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ. ಬಿಜೆಪಿ ರಾಷ್ಟ್ರೀಯ ನಾಯಕರು ಸಿಎಂಗೆ ಕೊಡ್ತಿಲ್ಲ. ಹೀಗಾಗಿ ಸಿಎಂ ಬಿಎಸ್ ವೈ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಹಣ ಬಿಡುಗಡೆ ಆಗ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಪಾಲನ್ನೂ ಕೇಂದ್ರ ಸರ್ಕಾರ ನೀಡಿಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :