ಬೆಂಗಳೂರು : ಮಹಿಳೆಯ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ರೋಶಾವೇಶಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಿದ್ದರಾಮಯ್ಯಗೆ ಟಾಂಗ್ ನೀಡಿದೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಮಗನ ವಿರುದ್ಧ ದೂರು ಹೇಳಿದ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಮೇಲೆ ದರ್ಪ ತೋರಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಮರ್ಯಾದಾ ಪುರುಷೋತ್ತಮ ಸಿದ್ದರಾಮಯ್ಯ ಅವರೇ ಇದು ಲಫಂಗಾ ರಾಜಕೀಯ ಅಲ್ಲದೇ ಮತ್ತೇನು?