ಉತ್ತರ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಮಹದಾಯಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಂತ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಆರೋಪಿಸಿದ್ದಾರೆ.ಮಹದಾಯಿ, ಕಳಸಾ -ಬಂಡೂರಿ ಯೋಜನೆ ಕಾಮಗಾರಿ ಪ್ರಾರಂಭಿಸಲು ಕೇಂದ್ರ ಸರ್ಕಾರ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆಯು ನಿರಪೇಕ್ಷಣಾ ಪತ್ರವನ್ನು 2019 ಅಕ್ಟೋಬರ್ 17ರಂದು ಅನುಮತಿ ನೀಡಿದೆ ಎಂದು ಬಿಜೆಪಿ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದ್ದಾರೆ ಎಂದರು.ಗೋವಾ ರಾಜ್ಯ ಕೇವಲ ಎರಡು ಸಂಸದರನ್ನು ಹೊಂದಿದ್ದರೂ ಕೂಡ